ಮಕರ ಸಂಕ್ರಾಂತಿ

ಸೂರ್ಯ ಗ್ರಹವು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶ ಮಾಡುವ ದಿನವನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ. ಸೂರ್ಯ ಗ್ರಹವು ಒಂದು ರಾಶಿಯಲ್ಲಿ ಒಂದು ತಿಂಗಳ ಕಾಲ ಇರುತ್ತಾನೆ. ಸೂರ್ಯ, ಧನಸ್ಸು ರಾಶಿಯಿಂದ ಮಕರ ರಾಶಿಗೆ ಸೇರುವ ಸಮಯವನ್ನು ಮಕರ ಸಂಕ್ರಾಂತಿ ಎನ್ನುತ್ತಾರೆ.

ಪ್ರತಿ ವರ್ಷ ಜನವರಿ 14 ಅಥವಾ 15 ರಂದು ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ ಹಾಗೂ ಆನಂತರ ಆತನ ಪಥವು ಉತ್ತರಾಭಿಮುಖವಾಗಿ ಚಲಿಸಲು ಪ್ರಾರಂಭವಾಗುತ್ತದೆ. ಸಮಯದಲ್ಲಿ ಬೆಳಕು ಹೆಚ್ಚು ಇರುತ್ತದೆ. 6 ತಿಂಗಳು ಕಾಲ ಉತ್ತರಾಯಣ ನಂತರ ಅಂದರೆ ಜೂನ್ 15 ನಂತರ ದಕ್ಷಿಣಾಯನ ಪ್ರಾರಂಭ ಆಗುತ್ತದೆ.

ಸಂಕ್ರಾಂತಿ ಹಬ್ಬದ ವಿಶೇಷ

ಸಂಕ್ರಾಂತಿ ಹಬ್ಬವನ್ನು ಎಳ್ಳು-ಬೆಲ್ಲದ ಹಬ್ಬ ಎನ್ನುತ್ತಾರೆ. ರೈತರು ತಾವು ಬೆಳೆದ ಬೆಳೆಗಳನ್ನು ರಾಶಿ ರಾಶಿಯಾಗಿ ಹಾಕಿ ಅದಕ್ಕೆ ಪೂಜೆ ಮಾಡುತ್ತಾರೆ. ಕಾರಣಕ್ಕಾಗಿ ಸುಗ್ಗಿಯ ಹಬ್ಬ ಎನ್ನುತ್ತಾರೆ. ಸಂಕ್ರಾಂತಿಯ ಹಬ್ಬದ ದಿನ ಎಳ್ಳು ದಾನ ಮಾಡಬೇಕು ಎಂಬ ನಿಯಮವಿದೆ. ಎಳ್ಳು ಶನಿ ಗ್ರಹದ ಪ್ರತಿನಿಧಿ ಹಾಗೂ ಆತನ ಧಾನ್ಯವಾಗಿದೆ. (ಶನಿಗ್ರಹ ಎಂದೊಡನೆ ಎಲ್ಲರಿಗೂ ಏನೋ ಒಂದು ರೀತಿ ಭಯ) ಎಳ್ಳನ್ನು ನಾವು ದಾನ ಮಾಡಲು ಹೋದಾಗ ಸಾಮಾನ್ಯವಾಗಿ ಅದನ್ನು ತೆಗೆದುಕೊಳ್ಳಲು ಇಷ್ಟ ಪಡುವುದಿಲ್ಲ. ಕಾರಣ ಅವರ ಪಾಪ ನಾಮ ತೆಗೆದುಕೊಂಡ ಹಾಗೆ ಎಂದು ಹಾಗೂ ದೋಷ ಉಂಟಾಗುವುದು ಎಂದು. ಆದ್ದರಿಂದ ಕಾರಣದಿಂದ ಎಳ್ಳಿನ ಜತೆಯಲ್ಲಿ ಬೆಲ್ಲ, ಕಡಲೆಬೀಜ, ಕೊಬ್ಬರಿಯನ್ನು ಮಿಶ್ರಣ ಮಾಡಿ ದಾನ ಮಾಡುವ ಪದ್ಧತಿ ಪ್ರಾರಂಭವಾಯಿತು. ಅಲ್ಲದೆ ಬೆಳೆಗಳು ಆಗ ತಾನೆ ಬೆಳೆದು ಮಾರುಕಟ್ಟೆಗೆ ಬಂದಿರುತ್ತದೆ. ಅವುಗಳನ್ನು ಪೂಜೆ ಮಾಡಿ ದಾನ ಧರ್ಮ ಮಾಡಿದರೆ ಇನ್ನು ಫಲ ಹೆಚ್ಚು ಬರುವುದು ಎಂಬ ನಂಬಿಕೆಯೂ ಇದೆ.

ವೈಜ್ಞಾನಿಕ ರೀತಿಯಲ್ಲಿ ನೋಡಿದಾಗ ಸಂಕ್ರಾಂತಿಯ ಸಮಯದಲ್ಲಿ ಚಳಿ ಹೆಚ್ಚು ಇರುತ್ತದೆ. ಎಳ್ಳು ಸೇವನೆಯಿಂದ ದೇಹದ ಉಷ್ಣತೆ ಹೆಚ್ಚು ಆಗುತ್ತದೆ ಹಾಗೂ ಚರ್ಮದ ಕಾಂತಿಯೂ ಹೆಚ್ಚುತ್ತದೆ. ಹಬ್ಬವು ಅತ್ಯಂತ ಪ್ರಾಚೀನ ಕಾಲದಿಂದಲೂ ಆಚರಣೆಗೆ ಬಂದಿದೆ. ಜನಪದ ಗೀತೆಯಲ್ಲೂ ಸಂಕ್ರಾಂತಿಯ ಬಗ್ಗೆ ಹೇಳಿದೆ. ಶಿವ ಮತ್ತು ಪಾರ್ವತಿಯರು ಲೋಕ ಸಂಚಾರ ಪ್ರಾರಂಭಿಸುತ್ತಾರಂತೆ. ಸಂಕ್ರಮಣದ ಕಾಲದ ಗೋಧೂಳಿ ಲಗ್ನಕ್ಕಿಂತ ಹೆಚ್ಚು ಸಮಯ ಭೂಲೋಕದಲ್ಲಿರುತ್ತಾರೆ ಎಂದು ಪುರಾಣದಲ್ಲಿ ಇದೆ. ಪುಣ್ಯ ದಿನದಲ್ಲಿ ಹಲವಾರು ದೇವತೆಗಳಿಗೆ ಶಾಪ ವಿಮೋಚನೆ ಉಂಟಾಗಿದೆ. ಉದಾಹರಣೆಗೆ ಇಂದ್ರ ಮತ್ತು ಚಿತ್ರಸೇನ.

ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳಿಗೆ ಪೂಜೆ ಸಲ್ಲಿಸಿ ಕಿಚ್ಚು ಹಾಯಿಸುತ್ತಾರೆ. ಹೊರ ದೇಶದಲ್ಲೂ ವಿಭಿನ್ನ ರೀತಿಯಲ್ಲಿ ಹಬ್ಬವನ್ನು ಆಚರಿಸುತ್ತಾರೆ.

ತಮಿಳುನಾಡಿನಲ್ಲಿ ಸಂಕ್ರಾಂತಿ

ತಮಿಳುನಾಡಿನಲ್ಲಿ ಹಬ್ಬವನ್ನು "ಪೊಂಗಲ್" ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳಕಾಲ ನಡೆಯುತ್ತದೆ. ಸಂದರ್ಭ ಹೊಸಬಟ್ಟೆ ತೊಡುವುದು, ಸಮೃದ್ದಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸುವುದು, ಗೋಪೂಜೆ, ಗೂಳಿಯನ್ನು ಪಳಗಿಸುವ ಆಟವೂ ನಡೆಯುತ್ತದೆ. ಹಲವೆಡೆ ವರ್ಷಪೂರ್ತಿ ತಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದ ಎತ್ತುಗಳನ್ನು ಕಿಚ್ಚು ಹಾಯಿಸುವ ಸಂಪ್ರದಾಯವೂ ಇದೆ.

ಕೇರಳದಲ್ಲಿ ಮಕರ ಜ್ಯೋತಿ

ಕೇರಳದಲ್ಲಿ ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನ ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕೆ ಆಗಮಿಸುತ್ತಾರೆ.

"ಮಕರ ವಿಳಕ್ಕು" ಎಂದು ಕರೆಯಲ್ಪಡುವ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ. ಶಬರಿಮಲೆಗೆ ತೆರಳಿದ ವೃತಧಾರಿಗಳು ಇದನ್ನು ವೀಕ್ಷಿಸಿದರೆ ಜೀವನ ಪಾವನ ಎಂಬ ನಂಬಿಕೆಯೂ ಇದೆ. ದೇಶದ ವಿವಿಧೆಡೆ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಸಂಕ್ರಾಂತಿ

ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಹಾಗೂ ಎಳ್ಳಿನ ಉಂಡೆಗಳನ್ನು ಹಂಚುವ ಸಂಪ್ರದಾಯವೂ ಇಲ್ಲಿದೆ. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಯನ್ನು "ಲೋಹರಿ," ಎಂದು ಕರೆಯುತ್ತಾರೆ. ಹಬ್ಬದ ಆಚರಣೆ ಕುರಿತಂತೆ ವಿಭಿನ್ನತೆ ಕಂಡು ಬಂದರೂ ಸಂಕ್ರಾಂತಿ ಸಮೃದ್ಧಿಯ ಸಂಕೇತವಾಗಿ ಉಳಿದಿರುವುದಂತು ಸತ್ಯ.

ಬೆಂಗಳೂರಿನ ಗವಿ ಗಂಗಾಧರ ದೇವಸ್ಥಾನದಲ್ಲಿ ವಿಶೇಷ

ಬೆಂಗಳೂರಿನ ದಕ್ಷಿಣ ಭಾಗದ ಕೇಂಪೆಗೌಡ ನಗರದ ಗವಿಪುರ ಬಡಾವಣೆಯಲ್ಲಿ ಗವಿ ಗಂಗಾಧರೇಶ್ವರ ದೇವಸ್ಥಾನ. ಸುಮಾರು 1300 ವರ್ಷಗಳ ಹಿಂದೆ ಹೊಯ್ಸಳ ಕಾಲದಲ್ಲಿ ದೇವಸ್ಥಾನ ನಿರ್ಮಾಣವಾಗಿದೆ ಎಂದು ಇತಿಹಾಸಕಾರರು ಹೇಳುತ್ತಾರೆ. ಪ್ರತಿವರ್ಷ 'ಮಕರ ಸಂಕ್ರಾತಿಯ ದಿನ' ಸಂಜೆ ಸೂರ್ಯನ ಕಿರಣಗಳು ಲಿಂಗದ ಮುಂದಿರುವ ನಂದಿಯ ಕೊಂಬಿನಿಂದ ಹಾದು, ಶಿವಲಿಂಗವನ್ನು ಸ್ಪರ್ಶಿಸುತ್ತದೆ. ದೃಷ್ಯವನ್ನು ವೀಕ್ಷಿಸಲು ಸಾವಿರಾರು ಭಕ್ತರು ಬಹಳ ದೂರ ಪ್ರದೇಶಗಳಿಂದ ಬರುತ್ತಾರೆ. 'ಸ್ವಯಂಭು'ವೆಂದು ಪ್ರಸಿದ್ಧಿಪಡೆದ ಈಕ್ಷೇತ್ರದಲ್ಲಿ 'ಗೌತಮ ಮಹರ್ಷಿ'ಗಳು ಗುಹಾಂತರ ದೇವಾಲಯದಲ್ಲಿ ತಪಸ್ಸನ್ನು ಆಚರಿಸಿದರೆಂದು ಇತಿಹಾಸವಿದೆ.