ಭಾರತ
ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿದವರು ಮಹಾತ್ಮ ಗಾಂಧಿ. ಅವರ ಅಹಿಂಸೆಯ ಹೋರಾಟ ದೇಶಕ್ಕೆ ಪರಕೀಯರ
ಆಳ್ವಿಕೆಯಿಂದ ಮುಕ್ತಿಯನ್ನು ದೊರಕಿಸಿ ಕೊಟ್ಟಿತು. ಇದಕ್ಕಾಗಿಯೇ ಅವರನ್ನು ರಾಷ್ಟ್ರಪತಿ ಎಂದು ಕರೆದು
ಗೌರವಿಸಲಾಗಿದೆ.
ಇವರ ಪೂರ್ಣ
ಹೆಸರು ಮೋಹನದಾಸ್ ಕರಮಚಂದ್ ಗಾಂಧಿ ಅಕ್ಟೋಬರ್ 2, 1869 ರಲ್ಲಿ ಭಾರತದ ಗುಜರಾತ್ ರಾಜ್ಯದ ಪೋರಬಂದರ್
ನಲ್ಲಿ ಜನಿಸಿದರು. ಇವರ ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ
ಕಸ್ತೂರಿ ಬಾ ಅವರನ್ನು ವಿವಾಹವಾದರು. ಇವರಿಗೆ ನಾಲ್ವರು ಮಕ್ಕಳು ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ
, ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ. ಮುಂಬಯಿ ನಗರದಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು
ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾದಲ್ಲಿ ಉದ್ಯೋಗ ನಿರ್ವಹಿಸುವ ಅವಕಾಶ ಅವರಿಗೆ ದೊರಕಿತು. ಅಲ್ಲಿ
ಭಾರತೀಯ ನಿವಾಸಿಗಳಿಗೆ ಸಮಾನ ಹಕ್ಕುಗಳನ್ನು ನೀಡದ ಬ್ರಿಟಿಷ್ ಸರ್ಕಾರದ ವರ್ಣಭೇದ ನೀತಿಯನ್ನು ಅಳಿಸಲು
ಚಳುವಳಿಯನ್ನು ಆರಂಭಿಸಿದರು. ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ
ದರ್ಜೆ ಟಿಕೆಟ್ ತೆಗೆದು ಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರ ಹಾಕಿದಾಗ, ಅವರ ವರ್ಣಭೇದ
ನೀತಿಯ ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವೆಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ ಒಂದು
ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು.
ಭಾರತಕ್ಕೆ
ಮರಳಿ ಬಂದ ನಂತರ ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ
ಹೊಸ ರೂಪವನ್ನು ನೀಡಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಆದರೆ
ಅವರ ಉತ್ಸಾಹ ಅದರಿಂದ ಕುಗ್ಗಲಿಲ್ಲ. ಸ್ವದೇಶಿ ತತ್ವದ ಅನ್ವಯ ಖಾದಿ ಬಟ್ಟೆಗಳನ್ನೇ ತೊಡುವ ಸಂಪ್ರದಾಯ
ಜನಪ್ರಿಯವಾಯಿತು. ಭಾರತೀಯ ಮಹಿಳೆಯರಿಗೆ ಪ್ರತಿ ದಿನವೂ ಖಾದಿ ನೇಯುವಂತೆ ಕೇಳಿ ಗಾಂಧೀಜಿಯವರು ಮಹಿಳೆಯರಿಗೂ
ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸುವ ಅವಕಾಶ ಮಾಡಿಕೊಟ್ಟರು.
ಭಾರತದ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹಳ ಮುಖ್ಯವಾದ ಘಟನೆ ದಂಡಿಯಾತ್ರೆ. ಉಪ್ಪಿನ ಉತ್ಪಾದನೆಗೆ ಬ್ರಿಟಿಷ್
ಸರ್ಕಾರಕ್ಕೆ ಕರ ಕೊಡುವ ಬದಲು ಜನರು ತಾವಾಗಿಯೇ ಉಪ್ಪನ್ನು ಉತ್ಪಾದಿಸಲು ಗಾಂಧೀಜಿ ಮಾರ್ಚ್ 12,
1930 ರಂದು ಸಹಸ್ರಾರು ಜನರೊಡನೆ ಸಮುದ್ರತೀರಕ್ಕೆ ನಡೆದು ಉಪ್ಪನ್ನು ಉತ್ಪಾದಿಸಿದರು. ಮೇ 8,
1933 ರಂದು ಆರಂಭಗೊಂಡು 21 ದಿನಗಳ ಕಾಲಬ್ರಿಟಿಷ್ ಆಡಳಿತವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು.
* ಮಾರ್ಚ್ 3, 1939 ರಂದು ಆರಂಭಗೊಂಡು ಇನ್ನೊಂದು ಉಪವಾಸವನ್ನು ನಡೆಸಿದರು. ಗಾಂಧೀಜಿ 1924 ರಲ್ಲಿ
ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷ ರಾಗಿದ್ದರು.”ಭಾರತ ಬಿಟ್ಟು ತೊಲಗಿರಿ” ಚಳುವಳಿ 1942 ರಲ್ಲಿ ಆರಂಭವಾಯಿತು. ಆಗಸ್ಟ್
9, 1942 ರಂದು ಬ್ರಿಟಿಷರು ಗಾಂಧೀಜಿಯನ್ನು ಮತ್ತೆ ಬಂಧಿಸಿ ಎರಡು ವರ್ಷಗಳ ಕಾಲ ಬಂಧನದಲ್ಲಿರಿಸಿದರು.
ಕೊನೆಗೂ 1947 ಅಗಸ್ಟ 15 ರಂದು ಭಾರತಕ್ಕೆ ಸ್ವಾತಂತ್ರ್ಯ ಬಂದಿತು. ಆದರೆ ದೇಶ ಭಾರತ ಮತ್ತು ಪಾಕಿಸ್ತಾನ ಇಬ್ಬಾಗವಾಯಿತು ಆಗ ಉಂಟಾದ ಕೋಮುಗಲಭೆಯನ್ನು ತಡೆಯಲು ಗಾಂಧೀಜಿ ಶ್ರಮಿಸಿದರು. ಆದರೆ 1948ರ ಜನವರಿ 30ರಂದು ನಾಥಾರಾಮ್ ವಿನಾಯಕ್ ಗೋಡ್ಸೆ ಎನ್ನುವವನು ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಮಾಡಿದ. ಅವರು ಸಾರಿದ ನೀತಿ-ತತ್ವಗಳಿಗೆ ಎಂದಿಗೂ ಸಾವಿಲ್ಲ.