ವಿಶ್ವ ಆರೋಗ್ಯ ದಿನ ಮತ್ತು ಮಹತ್ವ
ಎಲ್ಲರಿಗೂ ಉತ್ತಮ
ಆರೋಗ್ಯ ನೀಡುವ ನಿಟ್ಟಿನಲ್ಲಿ ಹಲವು ವ್ಯಕ್ತಿಗಳ ಶ್ರಮದಿಂದ ವಿಶ್ವ ಆರೋಗ್ಯ ಸಂಸ್ಥೆಯನ್ನು ಪ್ರಾರಂಭಿಸಲಾಯಿತು.
ವಿಶ್ವದ ಸಕಲ ಮನುಜರ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಹತ್ವಾಕಾಂಕ್ಷೆಯಿಂದ ಹಲವು ಯೋಜನೆಗಳನ್ನು ಪ್ರಾರಂಭಿಸಲಾಯಿತು.
1948ರಲ್ಲಿ ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಶೃಂಗಸಭೆಯಲ್ಲಿ ವರ್ಷಕ್ಕೊಮ್ಮೆ ವಿಶ್ವ ಆರೋಗ್ಯ ದಿನವನ್ನು
ಆಚರಿಸುವ ಮಹತ್ವದ ಬಗ್ಗೆ ಸಮಾಲೋಚಿಸಲಾಯಿತು.
ಪ್ರಥಮ ವಿಶ್ವ ಆರೋಗ್ಯ ದಿನ
1950ರ ಏಪ್ರಿಲ್
7 ರಂದು ಪ್ರಥಮ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ವಿಶ್ವ
ಆರೋಗ್ಯ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ. ಅಂದಿನಿಂದ ವಿಶ್ವ ಆರೋಗ್ಯ ಸಂಸ್ಥೆ ಪ್ರತಿವರ್ಷವೂ
ಒಂದು ವಿಷಯದ ಮೇಲ್ಪಂಕ್ತಿಯನ್ನು ಆರಿಸಿ ಆ ವಿಷಯದ ಕುರಿತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು
ವಿಶ್ವದೆಲ್ಲೆಡೆ ಅನುಷ್ಠಾನಗೊಳಿಸಲು ವಿವಿಧ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದೆ.
ವಿಶ್ವ ಆರೋಗ್ಯ ದಿನದ ಆಚರಣೆ
ಈ ಆಚರಣೆಯಲ್ಲಿ
ಆಯಾ ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಲಾಭರಹಿತ ಕಾರ್ಯನಿರ್ವಹಿಸುವ ಸಂಸ್ಥೆಗಳು ಭಾಗವಹಿಸಿ ಕಾರ್ಯಕ್ರಮಗಳ
ಯಶಸ್ವಿಗೆ ಸಹಕರಿಸುತ್ತವೆ. ಸಾರ್ವಜನಿಕರಿಗೆ ಆರೋಗ್ಯ ಮತ್ತು ವಿವಿಧ ಕೆಡುಕುಗಳ ಬಗ್ಗೆ ಮಾಹಿತಿ ಮತ್ತು
ಮಾರ್ಗದರ್ಶನ ನೀಡಲಾಗುತ್ತದೆ. ಇದರಲ್ಲಿ ಭಾಗವಹಿಸುವ ಸಂಸ್ಥೆಗಳು ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ
ಪ್ರಚಾರ ನೀಡಿ ಹೆಚ್ಚು ಹೆಚ್ಚು ಜನರಿಗೆ ಈ ಮಾಹಿತಿ ಲಭ್ಯವಾಗಲು ನೆರವಾಗುತ್ತವೆ.
ಕೆಲವು ಪ್ರಮುಖ ಧ್ಯೇಯೋದ್ದೇಶಗಳು
§ ಅಧಿಕ ರಕ್ತದೊತ್ತಡಕ್ಕೆ
ಕಾರಣ ಮತ್ತು ತಡೆಯುವ ನಿಟ್ಟಿನಲ್ಲಿ ಜನಸಾಮಾನ್ಯರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು
§ ವಿವಿಧ ರೋಗಗಳಿಗೆ
ತುತ್ತಾಗುವ ಕಾರಣಗಳು ಮತ್ತು ಅದರಿಂದ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿಗಳು
§ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗದಿರಲು ಕೈಗೊಳ್ಳಬೇಕಾದ ಕ್ರಮಗಳು
§ ಕುಡಿಯುವ ನೀರಿದ ಸದ್ಬಳಕೆ, ಬಯಲು ಶೌಚಾಲಯದ ಅಪಾಯಗಳು