ನೀರು ತುಂಬುವ ಹಬ್ಬ

ದೇಶದಾದ್ಯಂತ ಐದು ದಿನಗಳ ಕಾಲ ದೀಪಾವಳಿಯನ್ನು ಆಚರಿಸಲಾಗುತ್ತದೆ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಮೂರು ದಿನ ಮಾತ್ರ ‘ಹಟ್ಟಿ ಹಬ್ಬ’ ಎಂದು ಆಚರಿಸಲಾಗುತ್ತದೆ.

ಪೌರಾಣಿಕ ಸ್ಪರ್ಶ

ಪೌರಾಣಿಕ ಮಹತ್ವವಿದ್ದರೂ ದೀಪಾವಳಿಗೆ ಸಂಬಂಧಿಸಿದ ಅನೇಕ ಜನಪದ ಆಚರಣೆಗಳಿವೆ. ಪಾಂಡವರು ತಮ್ಮ ವನವಾಸವನ್ನು ಮುಗಿಸಿ, ಒಂದು ವರ್ಷ ಅಜ್ಞಾತವಾಸವನ್ನು ಮುಗಿಸಿ ಮರಳಿ ಬಂದ ಪಾಂಡವರ ನೆನಪಿಗಾಗಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ಇದರ ನಂತರ ಪಾಂಡವರ ವಿಗ್ರಹಗಳ ಪ್ರತಿಷ್ಠಾಪನೆ ಕಾರ್ಯ ರೂಢಿಗೆ ಬಂತು.  ತಮ್ಮ ಹೆಜ್ಜೆಗುರುತುಗಳನ್ನು ಚಿತ್ರಿಸುವ ಸಂಪ್ರದಾಯವೂ ಇದೆ. ಅದು ಪಾಂಡವರ ಹಸ್ತಿನಾವತಿಯ ಪ್ರವೇಶವನ್ನು ಚಿತ್ರಿಸುತ್ತದೆ.

ಹೆಸರೇ ಹೇಳುವಂತೆ ಇದು ನೀರನ್ನು ಸಂಗ್ರಹಿಸುವ ದಿನ. ಈ ದಿನ ಸ್ನಾನದ ಮನೆ, ಬಚ್ಚಲನ್ನು ಸ್ವಚ್ಛಮಾಡಿ, ಮಾರನೆಯ ದಿನದ ಅಭ್ಯಂಜನಕ್ಕೆ ನೀರು ಹಿಡಿದು ಇಡುತ್ತಾರೆ. ಕೊಳೆಯನ್ನು ಹೋಗಿಸಿ ಮನೆಯನ್ನು ಶುಭ್ರಮಾಡುವಂತೆ , ನಮ್ಮ ಮನಸಿನಲ್ಲಿರುವ ಕೆಟ್ಟ ವಿಷಯಗಳನ್ನು ತೊಲಗಿಸಿ ನಿರ್ಮಲವಾಗಿ ಇಟ್ಟುಕೊಳ್ಳಿ ಎಂಬ ಸಂಕೇತ ಇರಬಹುದು.

ನೀರು ತುಂಬುವ ಹಬ್ಬದ ದಿನ ಏನು ಮಾಡಬೇಕು?

1) ಹಂಡೆ ತುಂಬಿ ಕಾಯಿಸಿ ಸ್ನಾನ ಮಾಡುವ ಅನುಕೂಲ ಇದ್ದವರು ಅದನ್ನು ತಿಕ್ಕಿ ತೊಳೆದು ಅಲಂಕರಿಸಿ ಶುದ್ಧವಾದ ನೀರನ್ನು ಮುಕ್ಕಾಲು ಭಾಗ ತುಂಬಿ ಇಡಿ.

2) ಅನಂತರ ಬಾವಿ ಇದ್ದವರು ತಮ್ಮ ಮನೆಯ ಸಂಪ್ರದಾಯದಂತೆ ನೀರು ಸೇದಿ ತಂದು ಒಂದು ಕಲಶದಲ್ಲಿ ದೇವರ ಕೊಣೆಯೊಳಗೋ ಹೊರಗೋ ಶುದ್ಧವಾದ ಜಾಗದಲ್ಲೋ ಇಡಿ.

3) ತಂಡುಲಾಕ್ಷತೆ, ಹೂವು, ಹಣ್ಣು , ಗಂಧ, ಅರಸಿಣ ಪುಡಿ, ಕುಂಕುಮ, ಇತ್ಯಾದಿ  ಸಿದ್ಧಪಡಿಸಿ.

4) ಮಂತ್ರಾಕ್ಷತೆ, ಹೂವು ಕೈಯಲ್ಲಿ ಹಿಡಿದು ನೀರು ತುಂಬಿದ ಕಲಶದಲ್ಲಿ ತನ್ನ ಅಂಗುಷ್ಟದಿಂದ ಗಂಗೆಗೆ ಜನ್ಮವಿತ್ತ ರಮಾಪತಿ ತ್ರಿವಿಕ್ರಮನನ್ನು ಸ್ಮರಿಸಿ ಕಲಶದಲ್ಲಿ ಹೂವು ಅಕ್ಷತೆ ಹಾಕಿ.

ನಂತರ ಆಸನ, ಅರ್ಘ್ಯ, ಪಾದ್ಯ, ಆಚಮನ, ಮಧುಪರ್ಕ, ಸ್ನಾನ, ವಸ್ತ್ರ, ಯಜ್ನೋಪವೀತ, ಗಂಧ, ಪುಷ್ಪ, ಧೂಪ, ದೀಪ, ನೈವೇದ್ಯ, ತಾಂಬೂಲ, ಮಂಗಲಾರತಿ, ಮಂತ್ರಪುಷ್ಪ, ನಮಸ್ಕಾರ ಅರ್ಪಿಸಿ.

5) ನಂತರ ಅಕ್ಷತೆ ಹೂವು ಕೈಯಲ್ಲಿ ಹಿಡಿದುಕೊಂಡು ಕಲಶದಲ್ಲಿ ಗಂಗಾದೇವಿಯನ್ನು ಅವಾಹಿಸಿ (ಸ್ಮರಿಸಿ).

ಗಂಗೇ ಚ ಯಮುನೇ ಕೃಷ್ಣೇ ಗೋದಾವರೀ ಸರಸ್ವತೀ|

ನರ್ಮದೇ ಸಿಂಧು ಕಾವೇರೀ ಜಲೇ$ಸ್ಮಿನ್ ಸನ್ನಿಧಿಮ್ ಕುರು||

ವಸ್ತ್ರವನ್ನು ಅರ್ಪಿಸಿ ಹರಿದ್ರಾ, ಕುಂಕುಮ, ಗಂಧ, ಪುಷ್ಪ ಅರ್ಪಿಸಿ.

6) ಈ ಕೆಳಗಿನ ನಾಮಗಳಿಂದ ಅಕ್ಷತೆ ಹಾಕಿ

ನಂದಿನ್ಯೈ ನಮಃ, ನಲಿನ್ಯೆ ನಮಃ, ಸೀತಾಯೈ ನಮಃ , ಮಾಲತ್ಯೈ ನಮಃ , ಮಲಾಪಹಾಯೈ ನಮಃ, ವಿಷ್ಣುಪಾದಾಬ್ಜ ಸಂಭೂತಾಯೈ ನಮಃ, ಗಂಗಾಯೈ ನಮಃ, ತ್ರಿಪಥಗಾಮಿನ್ಯೈ ನಮಃ , ಭಾಗೀರಥ್ಯೈ ನಮಃ, ಭೋಗವತ್ಯೈ ನಮಃ, ಜಾಹ್ನವ್ಯೈ ನಮಃ, ತ್ರಿದಶೇಶ್ವರ್ಯೈ ನಮಃ, ಗಂಗಾಭಾಗೀರಥ್ಯೆ ನಮಃ

7) ಧೂಪವನ್ನು ತೋರಿಸಿ, ಮೂರು ಬತ್ತಿಯ ಆರತಿ ತೋರಿಸಿ ನಂದಿಸಿ. ಹಣ್ಣು, ಕಾಯಿ ಮತ್ತು ಅನುಕೂಲ ಇದ್ದಲ್ಲಿ ಇತರ ನೈವೇದ್ಯಗಳನ್ನು ಮೊದಲು ತ್ರಿವಿಕ್ರಮ ದೇವರಿಗೆ ಅರ್ಪಿಸಿ ಅನಂತರ ರಮಾದೇವಿಗೆ ಅರ್ಪಿಸಿ. ಇದರೊಳಗಿಂದ ಸ್ವಲ್ಪ ಬೇರೊಂದು ತಟ್ಟೆಯಲ್ಲಿ ಬಡಿಸಿ ಭಾಗೀರಥಿ ದೇವಿಗೆ ಅದನ್ನು ನಿವೇದಿಸಿ.

10) ತದನಂತರ ಕರ್ಪೂರ ಹಾಕಿ ಮಹಾಮಂಗಳಾರತಿ ಮೊದಲು ತ್ರಿವಿಕ್ರಮ ದೇವರು ನಂತರ ರಮಾದೇವಿ ತೋರಿಸಿ ಭಾಗೀರಥಿಗೆ ತೋರಿಸಿ. ಭಾಗೀರಥೀ ದೇವಿಯನ್ನು ಪ್ರಾರ್ಥಿಸಿ. ಅಕ್ಷತೆ ಹಾಕಿ ನಮಸ್ಕರಿಸಿ. ಈಗ ಆ ಕಲಶದ ನೀರನ್ನು ಹಂಡೆಯಲ್ಲಿ ಹಾಕಿ.

15) ಸೂರ್ಯಾಸ್ತದ ನಂತರ ಇಂದಿನಿಂದ ಆಕಾಶದೀಪವನ್ನು ಹಚ್ಚಬೇಕು.

ಒಬ್ಬ ಮನುಷ್ಯನ ಎತ್ತರದಷ್ಟು ಒಂದು ಕೋಲನ್ನು ಅಂಗಳದಲ್ಲಿ ನೆಟ್ಟು (ಬಿದಿರಿನ ಕೋಲು ಉಪಯೋಗಿಸಬಾರದು) ಆ ಕೋಲಿನ ತುದಿಯಲ್ಲಿ ಅಷ್ಟದಲ ಕಮಲಾಕಾರದಲ್ಲಿ ಎಂಟು ದಿಕ್ಕುಗಳಲ್ಲಿ ಎಂಟು ದೀಪಗಳನ್ನೂ ಮಧ್ಯೆ ಒಂದು ದೊಡ್ಡ ದೀಪವನ್ನೂ ಹಚ್ಚಬೇಕು. ಎಳ್ಳೆಣ್ಣೆ ಬಿಟ್ಟು ಬೇರೆ ಎಣ್ಣೆ ಉಪಯೋಗಿಸಬಾರದು.

ಇದನ್ನು ಒಂದು ತಿಂಗಳು ಹಚ್ಚಬೇಕು. ಇವೆಲ್ಲವೂ ಸಂಪ್ರದಾಯಗಳಾಗಿದ್ದು ಆಯಾ ಪ್ರದೇಶಕ್ಕೆ ತಕ್ಕಂತೆ ಆಚರಣೆಯಲ್ಲಿದೆ.