ಹೋಳಿ ಹಬ್ಬ

ಫಾಲ್ಗುಣ ಶುದ್ದ ಹುಣ್ಣಮಿಯಂದು ಆಚರಿಸಲ್ಪಡುವ ಹೋಳಿಹಬ್ಬ ಭಾರತದ ಪುರಾತನ ಆಚರಣೆಗಳಲ್ಲಿ ಒಂದು ಪುರಾಣದಲ್ಲಿ ಉಲ್ಲೇಖವಿರುವ ಹೋಳಿ ಹಬ್ಬ  ಅಥವಾ ಕಾಮದಹನದಲ್ಲಿ- ತಾರಕಾಸುರನೆಂಬ ರಾಕ್ಷಸ ರಾಜ ಬ್ರಹ್ಮನ ವರಬಲದ ಸೊಕ್ಕಿನಿಂದ ಲೋಕದಲ್ಲಿ ಮೆರೆಯತೊಡಗಿದಾಗಆತನ ಉಪಟಳ ತಾಳಲಾರದೆಅವನ ಸಂಹಾರಕ್ಕೆ ದೇವತೆಗಳು ಉಪಾಯ ಹೂಡುತ್ತಾರೆ. ಶಿವನಿಗೆ ಜನಿಸಿದ ಏಳು ದಿನದ ಮಗುವಿನಿಂದ ಮಾತ್ರವೇ ತನಗೆ ಸಾವು ಎಂಬ ವರಬಲವೇ ಆತನ ಮದಕ್ಕೆ ಕಾರಣ. ಆದರೆ ಆ ಸಂದರ್ಭದಲ್ಲಿ ಶಿವನು ದಕ್ಷ ಯಜ್ಞದಲ್ಲಿ ದಾಕ್ಷಾಯಿಣಿಯನ್ನು ಕಳೆದುಕೊಂಡು ಭೋಗಸಮಾಧಿಯಲ್ಲಿದ್ದ ಕಾರಣಮತ್ತೊಂದೆಡೆ ಶಿವೆಯೂ ಶಿವನಿಗಾಗಿ ತಪಸ್ಸು ಮಾಡುತ್ತಿದ್ದ ಕಾರಣಅವರಿಬ್ಬರೂ ಒಂದುಗೂಡುವಂತಿರಲಿಲ್ಲ. ದೇವತೆಗಳು ಕಾಮ (ಮನ್ಮಥ)ನ ಮೊರೆ ಹೋದರು. ತತ್ಫಲವಾಗಿ ತನ್ನ ನಿರ್ನಾಮದ ಅರಿವಿದ್ದೂಲೋಕಕಲ್ಯಾಣವೆಂಬ ಅತಿಶಯವಾದ ಪರೋಪಕಾರಾರ್ಥವಾಗಿ ಕಾಮನು ತನ್ನ ಹೂಬಾಣಗಳಿಂದ ಶಿವನನ್ನು ಬಡಿದೆಬ್ಬಿಸಿತಪೋಭಂಗ ಮಾಡುತ್ತಾನೆ. ಕೆರಳಿ ಮೂರನೇ ಚಕ್ಷುವನ್ನು ತೆರೆದ ಈಶ್ವರನ ಕ್ರೋಧಾಗ್ನಿಗೆ ಕಾಮನು ಸುಟ್ಟು ಭಸ್ಮವಾಗುತ್ತಾನೆ. ಕಾಮನರಸಿ ರತಿದೇವಿಯು ಪರಿಪರಿಯಾಗಿ ಶಿವನಲ್ಲಿ ಪತಿಭಿಕ್ಷೆ ಯಾಚಿಸಲುಕಾಮನು ಅನಂಗನಾಗಿಯೇ ಇರುತ್ತಾನೆ. ಆದರೆ ಪತ್ನಿಗೆ ಮಾತ್ರ ಶರೀರಿಯಾಗಿ ಕಾಣಿಸುತ್ತಾನೆ ಎಂದು ಶಿವನು ಅಭಯ ನೀಡಿದನೆಂಬುದು ಪುರಾಣ ಕಥನ.

ಮತ್ತೊಂದು ಪಾಠಾಂತರದ ಪ್ರಕಾರ - ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಅಂದು ಬ್ರಹ್ಮನಲ್ಲಿ ವರವನ್ನು ಬೇಡಿದ್ದ. ಭೋಗಸಮಾಧಿಯಲ್ಲಿದ್ದ ಶಿವಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದರು. ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು "ಕಾಮನ ಹುಣ್ಣಿಮೆ"ಯಾಗಿ ಆಚರಿಸಲ್ಪಡುತ್ತದೆ.

ನಾರದ ಪುರಾಣದಲ್ಲಿ ಮತ್ತೊಂದು ಕಥೆ ಬರುತ್ತದೆ. ತಾನೇ ದೇವರು ಎಂದು ಒಪ್ಪಿಕೊಳ್ಳದೆ ಶ್ರೀಹರಿಯನ್ನೇ ಜಗನ್ನಿಯಾಮಕನೆಂದು ಪರಿಭಾವಿಸುವ ತನ್ನದೇ ಕರುಳ ಕುಡಿ ಪ್ರಹ್ಲಾದನನ್ನು ಕೊಲ್ಲಲುದೈತ್ಯರಾಜ ಹಿರಣ್ಯಕಶ್ಯಪು ನಾನಾ ವಿಧದ ಪ್ರಯತ್ನಗಳನ್ನು ಮಾಡಿಯೂ ವಿಫಲನಾಗಿಕೊನೆಗೆಬೆಂಕಿಯಿಂದ ರಕ್ಷಣೆ ನೀಡುವ ವಸ್ತ್ರ ಹೊಂದಿರುವ ತಂಗಿ ಹೋಳಿಕಾ (ಹೋಲಿಕಾ)ಳ ಮೊರೆ ಹೋಗುತ್ತಾನೆ. ಅಣ್ಣನ ಅನುಜ್ಞೆಯಂತೆ ಬಾಲ ಪ್ರಹ್ಲಾದನನ್ನು ಹೊತ್ತುಕೊಂಡ ಹೋಳಿಕಾಅಗ್ನಿಕುಂಡ ಪ್ರವೇಶಿಸುತ್ತಾಳೆ. ಆಗ ವಸ್ತ್ರವು ಹಾರಿಹೋಗುತ್ತದೆಹೋಳಿಕಾಳ ದಹನವಾಗುತ್ತದೆ. ವಿಷ್ಣು ಭಕ್ತಾಗ್ರೇಸರ ಪ್ರಹ್ಲಾದ ಬದುಕುಳಿಯುತ್ತಾನೆ.

ಮೇಲೆ ಹೇಳಿದ ಎರಡೂ ಪುರಾಣ ಕಥನಗಳ ಸಂದೇಶ ಒಂದೇ. ಕೆಟ್ಟದ್ದನ್ನು ಸುಟ್ಟು ಬಿಡುವುದುಕಾಮಕ್ರೋಧಾದಿ ಅರಿಷಡ್ವರ್ಗಗಳನ್ನು ಅಗ್ನಿಕುಂಡದಲ್ಲಿ ಸುಟ್ಟುಸದಾಚಾರವನ್ನು ರೂಢಿಸಿಕೊಳ್ಳುವುದು. ಆಸುರೀ ಶಕ್ತಿಗಳ ನಿರ್ನಾಮದ ದ್ಯೋತಕವಾಗಿ ಹೋಳಿ ಅಂದರೆ ಉತ್ಸವಾಗ್ನಿ ಹಾಕುವ ಪದ್ಧತಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಆಚರಣೆಯಲ್ಲಿದೆ. ಇಂಥದ್ದೊಂದು ಅಮೂಲ್ಯ ಸಂದೇಶ ಸಾರುವ ಮತ್ತು ಆ ಮೂಲಕ ಕೆಡುಕಿಗೆ ಯಾವತ್ತೂ ಸೋಲು ಕಾದಿದೆ ಎಂಬ ಸಂದೇಶ ಸಾರುವ ಹೋಳಿ ಹಬ್ಬ ಅಥವಾ ಕಾಮನ ಹಬ್ಬದ ಆಚರಣೆಯಲ್ಲಿ ಸದುದ್ದೇಶವಿದೆ.

ಹೋಳಿ ಹಬ್ಬದಂದು  ಅಕ್ಕಿಹಿಟ್ಟು ಮತ್ತು ಅರಿಶಿನ ಬೆರೆಸಿದ ಗುಲಾಲು ತಯಾರಿಸಿಬಿದಿರಿನಿಂದ ಪಿಚಕಾರಿ ತಯಾರಿಸಿ ಬಣ್ಣದಾಟ ಆಡುವರು.ರಂಗಿನಾಟದ ನಂತರ ಅಭ್ಯಂಜನ ಸ್ನಾನ ಮಾಡಿ ದೇವರಲ್ಲಿ ಪ್ರಾರ್ಥಿಸಿ ಮನೆಗಳಲ್ಲಿ ವಿಶೇಷ ಅಡಿಗೆಗಳನ್ನು ತಯಾರಿಸುವರು. ಉತ್ತರ ಕರ್ನಾಟಕದ  ಪ್ರದೇಶದಲ್ಲಿ ಜೋಳದ ಹಿಟ್ಟಿನ ಗುಜಿಯಾ ಹಾಗೂ ಪಾಪ್ಡಿ ಜನಪ್ರಿಯವಾಗಿದೆ.ದೆಹಲಿಯಲ್ಲಿ ಈ ದಿನದಂದು ಹತ್ತು ತಲೆಯ ರಾವಣನ ಮೂರ್ತಿಯನ್ನು ಬಿದಿರಿನಿಂದ ತಯಾರಿಸಿಅದಕ್ಕೆ ಹಳೇ ಬಟ್ಟೆಗಳನ್ನೇಲ್ಲ ಧರಿಸಿ ಗಣ್ಯರನ್ನೇಲ್ಲ ಕರೆದುಅವರ ಸಮ್ಮುಖದಲ್ಲಿ ಲಂಕೇಶನನ್ನು ಸುಡುವುದು ವಾಡಿಕೆ.ಗ್ರಾಮೀಣ ಪ್ರದೇಶಗಳಲ್ಲಿ ಆ ದಿನ ಊರಿನವರ ಮನೆಯಲ್ಲಿ ಸಿಗುವ ಬೇಡದ ವಸ್ತುಗಳನ್ನೆಲ್ಲ ತಂದು ಒಂದೆಡೆ ಗುಡ್ಡೆ ಮಾಡಿರಾತ್ರಿ ಹುಡುಗನೊಬ್ಬನಿಗೆ ಶಿಖಂಡಿಯ ವೇಷ ಹಾಕಿಸಿಅವನಿಂದ ಊರಿನ ಐದು ಮನೆಗಳಲ್ಲಿ ಭಿಕ್ಷೆ ಬೇಡಿಸಿ ಕರೆತಂದು ಅವನಿಂದ ಆ ಬೇಡದ ವಸ್ತುಗಳ ಗುಡ್ಡೆಗೆ ಬೆಂಕಿ ಇಡಿಸುತ್ತಾರೆ. ಅದೇ ಅವರ ಕಾಮದಹನದ ಹಬ್ಬ.