ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಘೋಷಿಸಿದರು. ವಿಜ್ಞಾನ , ಸಮಾಜ ಮತ್ತು ಇಂಡಸ್ಟ್ರಿಗಳ ಏಕೀಕರಣದ ಸಂಕೇತವಾಗಿ, ವೈಜ್ಞಾನಿಕ ಸಂಶೋಧನೆ ಮತ್ತು ತಾಂತ್ರಿಕ ಸೃಜನಶೀಲತೆಯ ಗೌರವವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.
ಭಾರತವು ಅಣುಬಾಂಬ್ ಸ್ಫೋಟ, ಕ್ಷಿಪಣಿ ಉಡಾವಣೆ, ವಿಮಾನಗಳ ನಿರ್ಮಾಣ , ಕೃಷಿ, ನೀರಾವರಿ ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಮಾಡುವ ಮೂಲಕ ಜಗತ್ತಿನ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಎದುರಾಗುವ ಎಲ್ಲ ಅಡ್ಡಿಗಳನ್ನು ಸಮರ್ಥವಾಗಿ ಎದುರಿಸಲು ಸಮರ್ಥವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ನೆನಪಿಗಾಗಿ ಈ ದಿನವನು ಆಚರಿಸಲಾಗುತ್ತದೆ.
ಆ ದಿನದಂದು ಶಾಲಾ ಕಾಲೇಜುಗಳು, ತಾಂತ್ರಿಕ ಸಂಸ್ಥೆಗಳಲ್ಲಿ ಹಲವಾರು ಸ್ಪರ್ಧೆಗಳು ಉಪನ್ಯಾಸ, ರಸಪ್ರಶ್ನೆ, ಸಂವಾದ ಸೇರಿದಂತೆ ಹಲವಾರು ಕಾರ‍್ಯಕ್ರಮಗಳನ್ನು
ಹಮ್ಮಿಕೊಳ್ಳಲಾಗ್ತುದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉನ್ನತ ಕೊಡುಗೆ
ನೀಡಿದವರನ್ನು ಗುರುತಿಸಿ ಅವರಿಗೆ ಭಾರತದ ರಾಷ್ಟ್ರಪತಿಗಳು ರಾಷ್ಟ್ರೀಯ ತಂತ್ರಜ್ಞಾನ
ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾರೆ.