ಮಾರ್ಚ್ 15 ಈ ದಿನವನ್ನು ಎಲ್ಲಾ ದೇಶಗಳಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನ ಅಥವಾ ವರ್ಲ್ಡ್ ಕನ್ಸೂಮರ್ ರೈಟ್ಸ್ ಡೇ ಎಂದು ಆಚರಿಸಲಾಗುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ನ್ಯಾಯಸಮ್ಮತವಾದ, ಸುರಕ್ಷಿತವಾದ ಮತ್ತು ಉತ್ತಮ ಗುಣಮಟ್ಟದ ಉತ್ಪನ್ನಗಳು ಸಿಗಬೇಕು ಎಂಬ ಉದ್ದೇಶದಿಂದ ಅಮೆರಿಕದ ಆಗಿನ ಅಧ್ಯಕ್ಷ ಜಾನ್ ಎಫ್. ಕೆನಡಿಯವರು ಈ ದಿನದ ಅಗತ್ಯವನ್ನು ಪ್ರತಿಪಾದಿಸಿದರು. ತಮ್ಮ ದೇಶದಲ್ಲಿ ವಿಧೇಯಕಗಳನ್ನು ಹಾಗೂ ವಿಶ್ವಸಂಸ್ಥೆಯಲ್ಲಿ ಗೊತ್ತುವಳಿಗಳನ್ನು ಮಂಡಿಸಿದರು. 1983ರಲ್ಲಿ ಈ ದಿನಾಚರಣೆ ಆರಂಭವಾಯಿತು.